ಮೈಸೂರು: ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಪಡೆಯುವ ಕನಸು ಹೊಂದಿರುವ ಯುವಕರಿಗೆ ಸುವರ್ಣಾವಕಾಶ ಒದಗಿ ಬಂದಿದೆ. ಮೈಸೂರಿನ ಬೋಗಾದಿಯಲ್ಲಿರುವ ಕ್ರಿಯಾ ಸ್ಪರ್ಧಿ ಸಂಸ್ಥೆಯು ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಗೆ ವಿಶೇಷ ಉಚಿತ ತರಬೇತಿ ಕಾರ್ಯಕ್ರಮವನ್ನು ಆರಂಭಿಸುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಜೂನ್ 16ರಿಂದ ಆರಂಭವಾಗಲಿರುವ ಈ ತರಬೇತಿ ಕಾರ್ಯಕ್ರಮವು ಪೊಲೀಸ್ ನೇಮಕಾತಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಸಹಕಾರಿಯಾಗಲಿದೆ. ಪ್ರತಿದಿನ ಸಂಜೆ 5.30 ರಿಂದ ರಾತ್ರಿ 8 ಗಂಟೆಯವರೆಗೆ ತರಗತಿಗಳು ನಡೆಯಲಿದ್ದು, ಪರೀಕ್ಷಾ ಸಿದ್ಧತೆಗೆ ಅಗತ್ಯವಾದ ವಿಷಯಗಳನ್ನು […]

