ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಆರ್ಥಿಕ ಇಲಾಖೆಯ (HRMS-2.0 ನಿರ್ದೇಶನಾಲಯ) ವತಿಯಿಂದ ಮಹತ್ವದ ಸುತ್ತೋಲೆ ಹೊರಡಿಸಲಾಗಿದೆ. ಇನ್ಮುಂದೆ ಎಲ್ಲಾ ಸರ್ಕಾರಿ ನೌಕರರು ತಮ್ಮ ದಿನನಿತ್ಯದ ಹಾಜರಾತಿಯನ್ನು ‘ಕರ್ತವ್ಯ (KAMS)’ ಮೊಬೈಲ್ ಆಪ್ ಮೂಲಕವೇ ದಾಖಲಿಸಬೇಕಿದ್ದು, ಬೆಳಗ್ಗೆ 10 ಗಂಟೆಯೊಳಗೆ ಹಾಜರಾತಿ ನೋಂದಾಯಿಸುವುದು ಕಡ್ಡಾಯವಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಹಾಜರಾತಿ ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕ ಹಾಗೂ ಪರಿಣಾಮಕಾರಿಯಾಗಿ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ, ಕಚೇರಿಗಳ ನಿಖರ ಸ್ಥಳವನ್ನು ಗುರುತಿಸಲು ಜಿಯೋ ಟ್ಯಾಗಿಂಗ್ […]

